ಮಡಿಕೇರಿ, ನ. 5: ಕೊಡಗು ಜಿಲ್ಲೆಯಿಂದ ಪ್ರಥಮ ಬಾರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ನೇಮಕಗೊಂಡ ಮೊಗೇರ ಸಮಾಜದ ಗೌರವಾಧ್ಯಕ್ಷ ಹಾಗೂ ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ. ರವಿ ಅವರನ್ನು ಮೊಗೇರ ಸೇವಾ ಸಮಾಜದ ವತಿಯಿಂದ ನಗರದ ಬಾಲಭವನದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪಿ.ಎಂ. ರವಿ, ಮುಂದಿನ ದಿನಗಳಲ್ಲಿ ತುಳು ಅಕಾಡೆಮಿಯ ಪ್ರತಿಯೊಂದು ಕಾರ್ಯಕ್ರಮ, ಸಾಹಿತ್ಯ ಮತ್ತು ಸಾಂಸ್ಕøತಿಕ ಚಟುವಟಿಕೆಗಳಿಗೆ ಮೊಗೇರ ಸಮಾಜ ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಅಕಾಡೆಮಿ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಮಾಜದ ಸ್ಥಾಪಕ ಅಧ್ಯಕ್ಷ ಟಿ. ಸದಾನಂದ ಮಾಸ್ಟರ್, ನಿಕಟಪೂರ್ವ ಅಧ್ಯಕ್ಷ ಬಿ. ಶಿವಪ್ಪ, ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ, ಪ್ರಧಾನ ಕಾರ್ಯದರ್ಶಿ ಪಿ.ಬಿ. ಜನಾರ್ಧನ್, ಖಜಾಂಚಿ ರಾಜೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಬಿ. ಸುರೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಿ.ಎಂ. ದಾಮೋದರ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಜಿ. ಮೋಹನ್ ಹಾಗೂ ಸಮಿತಿ ಸದಸ್ಯರುಗಳು ಹಾಜರಿದ್ದರು.