ಸಿದ್ದಾಪುರ, ನ. 5 : ಗ್ರಾಮ ಪಂಚಾಯಿತಿಯಿಂದ ಪರವಾನಿಗೆ ಪಡೆಯದೆ ಹಸಿ ಮೀನು ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ನೆಲ್ಯಹುದಿಕೇರಿ ಮುಖ್ಯರಸ್ತೆಯ ಸಮೀಪ ಕಳೆದ ಕೆಲವು ದಿನಗಳಿಂದ ಪಂಚಾಯಿತಿಯಿಂದ ಪರವಾನಿಗೆ ಪಡೆಯದೆ ಹಸಿ ಮೀನು ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಮೇರೆಗೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಅಲ್ಲದೆ ಪೆÇಲೀಸರ ಸಮ್ಮುಖದಲ್ಲಿ ಮೀನು ಮಾರಾಟ ಮಾಡದಂತೆ ಸೂಚನೆಯೊಂದಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.