ನಾಪೆÉÇೀಕ್ಲು, ನ. 5: ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಗ್ರಾಮದ ಕಂಬೆಯಂಡ ಮುತ್ತಮ್ಮ ಅವರ ತೋಟದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ್ದು, 50ಕ್ಕೂ ಅಧಿಕ ಕಾಫಿ ಗಿಡಗಳು, ಬಾಳೆ ಮತ್ತು ಅಡಿಕೆ ಗಿಡಗಳನ್ನು ನಾಶಪಡಿಸಿ ಸುಮಾರು 50 ಸಾವಿರಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ. ಈ ಭಾಗದಲ್ಲಿ ಕಾಡಾನೆಗಳು ನಿರಂತರವಾಗಿ ದಾಳಿ ನಡೆಸುತ್ತಿದ್ದು, ಅರಣ್ಯ ಇಲಾಖೆ ಕೂಡಲೇ ಕಾಡಾನೆಗಳನ್ನು ಕಾಡಿಗಟ್ಟಲು ಹಾಗೂ ನಷ್ಟಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.