ಕೂಡಿಗೆ, ನ. 5: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2021ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಮಿಷನ್ ಅಂತ್ಯೋದಯ ಗ್ರಾಮಸಭೆ ತಾ. 9 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಯಾದ ಹಾರಂಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ವರದರಾಜು ವಹಿಸಲಿದ್ದಾರೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗುವುದು ಎಂದು ಅಭಿವೃದ್ಧಿ ಅಧಿಕಾರಿ ಸಂತೋಷ್ ತಿಳಿಸಿದ್ದಾರೆ.