ಪೆರಾಜೆ, ನ. 6: ಬಿಜೆಪಿ ರೈತ ಮೋರ್ಚಾ ಸಮಿತಿ ವತಿಯಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮೂರು ಮಸೂದೆಗಳಾದ, ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ರೈತರ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಮತ್ತು ಅಗತ್ಯ ಸರಕುಗಳ ತಿದ್ದುಪಡಿ ಮಸೂದೆಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಕರಪತ್ರಗಳನ್ನು ಪಂಚಾಯತ್ ವ್ಯಾಪ್ತಿಯಲ್ಲಿ ಹಂಚಲಾಯಿತು.

ಈ ಸಂದರ್ಭ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಶಕ್ತಿ ಕೇಂದ್ರದ ಅಧ್ಯಕ್ಷ ನಂಜಪ್ಪ ನಿಡ್ಯಮಲೆ, ಶಕ್ತಿ ಕೇಂದ್ರದ ಸಹಪ್ರಮುಖ್ ಚಿನ್ನಪ್ಪ ಅಡ್ಕ, ಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ ಧರಣೀಧರ್, ಮಡಿಕೇರಿ ತಾಲೂಕು ಭಾ.ಜ.ಪಾ. ಕಾರ್ಯದರ್ಶಿ ಪ್ರಸನ್ನ ನೆಕ್ಕಿಲ, ತಾಲೂಕು ಗ್ರಾಮಾಂತರ ಭಾಜಪ ಪ್ರಧಾನ ಕಾರ್ಯದರ್ಶಿ ಮಹೇಶ ಮೂಲೆಮಜಲು, ಪದಾಧಿಕಾರಿಗಳಾದ ಧನಂಜಯ ಕೋಡಿ, ಪ್ರವೀಣ್, ಜಿಲ್ಲಾ ಸಲಹಾ ಸಮಿತಿಯ ಸದಸ್ಯ ಅಮೆಚೂರ್ ಹೊನ್ನಪ್ಪ, ಸೇರಿದಂತೆ ವಿವಿಧ ಮೋರ್ಚಾದ ಪದಾಧಿಕಾರಿಗಳು, ಮಾಜಿ ಜನಪ್ರತಿನಿಧಿಗಳು, ವಾರ್ಡ್ ಅಧ್ಯಕ್ಷರುಗಳು, ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರುಗಳು ಕಾರ್ಯಕರ್ತರು ಇದ್ದರು.