ಮಡಿಕೇರಿ ನ.6 : ಪ್ರಕೃತಿಯ ನೈಜ ಸೌಂದರ್ಯವನ್ನು ಹೊಂದಿರುವ ಪ್ರವಾಸಿಗರ ಸ್ವರ್ಗವೆಂದೇ ಖ್ಯಾತಿ ಗಳಿಸಿರುವ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲೀಗ ಜೆಸಿಬಿಯದ್ದೇ ಸದ್ದು. ಮಾನವ ನಿರ್ಮಿತ ಅಪರಾಧಗಳಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವ ಬೆನ್ನಲ್ಲೇ ರಾಜಾಸೀಟ್‍ನಲ್ಲಿ ಜೆಸಿಬಿ ಯಂತ್ರಗಳ ಮೂಲಕ ಕಾಮಗಾರಿ ಕೈಗೊಂಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕೊಡಗಿನ ಇಳಿಜಾರು ಪ್ರದೇಶಗಳÀಲ್ಲಿ ಜೆಸಿಬಿಯಿಂದ ಕೆಲಸ ನಿರ್ವಹಿಸದಂತೆ ಸೂಚನೆ ನೀಡಲಾಗಿದ್ದರೂ, ಅಭಿವೃದ್ಧಿ ಕಾರ್ಯದ ನೆಪದಲ್ಲಿ ರಾಜಾಸೀಟ್‍ನಲ್ಲಿ ಮಂಗಳೂರು ರಸ್ತೆಯ ಮೇಲ್ಭಾಗದ ಮಣ್ಣನ್ನು ಜೆಸಿಬಿಯಿಂದ ತೆಗೆಯಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೀಣಾ ಅಚ್ಚಯ್ಯ ಕಾಮಗಾರಿ ನಡೆಸುತ್ತಿರುವವರನ್ನು ತರಾಟೆಗೆ ತೆಗೆದುಕೊಂಡರು.

ಮಡಿಕೇರಿ ನ.6 : ಪ್ರಕೃತಿಯ ನೈಜ ಸೌಂದರ್ಯವನ್ನು ಹೊಂದಿರುವ ಪ್ರವಾಸಿಗರ ಸ್ವರ್ಗವೆಂದೇ ಖ್ಯಾತಿ ಗಳಿಸಿರುವ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲೀಗ ಜೆಸಿಬಿಯದ್ದೇ ಸದ್ದು. ಮಾನವ ನಿರ್ಮಿತ ಅಪರಾಧಗಳಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವ ಬೆನ್ನಲ್ಲೇ ರಾಜಾಸೀಟ್‍ನಲ್ಲಿ ಜೆಸಿಬಿ ಯಂತ್ರಗಳ ಮೂಲಕ ಕಾಮಗಾರಿ ಕೈಗೊಂಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಡಗಿನ ಇಳಿಜಾರು ಪ್ರದೇಶಗಳÀಲ್ಲಿ ಜೆಸಿಬಿಯಿಂದ ಕೆಲಸ ನಿರ್ವಹಿಸದಂತೆ ಸೂಚನೆ ನೀಡಲಾಗಿದ್ದರೂ, ಅಭಿವೃದ್ಧಿ ಕಾರ್ಯದ ನೆಪದಲ್ಲಿ ರಾಜಾಸೀಟ್‍ನಲ್ಲಿ ಮಂಗಳೂರು ರಸ್ತೆಯ ಮೇಲ್ಭಾಗದ ಮಣ್ಣನ್ನು ಜೆಸಿಬಿಯಿಂದ ತೆಗೆಯಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೀಣಾ ಅಚ್ಚಯ್ಯ ಕಾಮಗಾರಿ ನಡೆಸುತ್ತಿರುವವರನ್ನು ತರಾಟೆಗೆ ತೆಗೆದುಕೊಂಡರು.

(ಮೊದಲ ಪುಟದಿಂದ) ಕ್ರಮವಲ್ಲ ಎಂದು ವೀಣಾಅಚ್ಚಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ತಲಕಾವೇರಿ ಬೆಟ್ಟದಲ್ಲಿ ಇಂಗು ಗುಂಡಿ ನಿರ್ಮಾಣ ಮಾಡಿ ಇಡೀ ಬೆಟ್ಟವೇ ಕುಸಿದು ಒಂದು ಕುಟುಂಬವನ್ನು ಬಲಿ ತೆಗೆದುಕೊಂಡಿದೆ. ಇದರ ಅರಿವಿದ್ದರೂ ಶಾಸಕರು ಈ ಬಗ್ಗೆ ಮೌನ ವಹಿಸಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದರು.

ಮಂಗಳೂರು ರಸ್ತೆಯ ಕೆಳಭಾಗದಲ್ಲಿ ಅನೇಕ ಕುಟುಂಬಗಳು ವಾಸಿಸುತ್ತಿದ್ದು, ಮುಂದೆ ಆಗಬಹುದಾದ ಅನಾಹುತವನ್ನು ತಡೆಯಲು ತಕ್ಷಣ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದರು.

ಪೊಲೀಸ್ ವಸತಿ ಗೃಹ ನಿರ್ಮಿಸಿ

ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಮಳೆಗಾಲದಲ್ಲಿ ವಸತಿ ಗೃಹಗಳು ಸೋರುತ್ತ್ತಿದೆ ಎಂಬ ಕಾರಣಕ್ಕಾಗಿ ಈಗಾಗಲೇ ಅನೇಕರು ಮನೆಗಳನ್ನು ಖಾಲಿ ಮಾಡಿದ್ದಾರೆ. ಒಂದೇ ಬಾರಿ ಹಲವು ವಸತಿ ಗೃಹಗಳನ್ನು ನಿರ್ಮಾಣ ಮಾಡುವ ಬದಲು ಹಂತ ಹಂತವಾಗಿ ನಿರ್ಮಾಣ ಮಾಡಿದರೆ ಸೂಕ್ತವೆಂದು ವೀಣಾಅಚ್ಚಯ್ಯ ಹೇಳಿದರು.

ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲೂ ಪೊಲೀಸ್ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸರ್ಕಾರದಿಂದ ಬರುವ ಅನುದಾನ ಸದ್ಬಳಕೆಯಾಗಬೇಕು ಎಂದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಖಜಾಂಚಿ ಹೆಚ್.ಎಂ.ನಂದಕುಮಾರ್ ಮಾತನಾಡಿ, ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿ ನೆಪದಲ್ಲಿ ನಗರವನ್ನು ಅಪಾಯದಂಚಿಗೆ ತಂದಿಟ್ಟಿದ್ದು, ಹಣ ಮಾಡುವ ಯೋಜನೆಯನ್ನು ಕೈಗೊಂಡಿದೆ ಎಂದು ಆರೋಪಿಸಿದರು.

ರಾಜಾಸೀಟು ಉದ್ಯಾನವನದಲ್ಲಿ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಜಿಲ್ಲೆಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಅನೇಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಮಡಿಕೇರಿ ನಗರದ ರಸ್ತೆಗಳು ಅಭಿವೃದ್ಧಿಯಾದಾಗ ಮಾತ್ರ ಪ್ರವಾಸೋದ್ಯಮದ ಬೆಳವಣಿಗೆ ಸಾಧ್ಯವೆಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ಎಸ್.ಸಿ ಘಟಕದ ಅಧ್ಯಕ್ಷ ಮುದ್ದುರಾಜು, ನಗರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಜಗದೀಶ್, ಪ್ರಭುರೈ, ವಿಕಾಸ್ ಅಚ್ಚಯ್ಯ ಹಾಗೂ ಎಂಎಲ್‍ಸಿ ಅವರ ಆಪ್ತ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ಹಾಜರಿದ್ದರು.