ಮಡಿಕೇರಿ, ನ. 7: ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಮ್ಮ ಕುಟುಂಬದೊಂದಿಗೆ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಅವರು ಸಚಿವರನ್ನು ಸ್ವಾಗತಿಸಿದರು. ನಂತರ ಆಂಜನೇಯ ದೇವಾಲಯಕ್ಕೂ ಸಚಿವರು ಭೇಟಿ ನೀಡಿದರು.