ಸುಂಟಿಕೊಪ್ಪ,ನ.8: ಕನ್ನಡ ರಕ್ಷಣಾ ವೇದಿಕೆ ಹಾಗೂ ಕೊಡಗು ಬ್ಲಡ್ ಡೊನಾರ್ಸ್ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಕ್ತದಾನ ಶಿಬಿರವನ್ನು ನಡೆಸಲಾಯಿತು.

7ನೇ ಹೊಸಕೋಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಉಚಿತ ರಕ್ತದಾನ ಶಿಬಿರವನ್ನು ನಾರಾಯಣಗೌಡ ಕನ್ನಡ ರಕ್ಷಣಾ ವೇದಿಕೆ ಸುಂಟಿಕೊಪ್ಪ ಹೋಬಳಿ ಘಟಕದ ಅಧ್ಯಕ್ಷರಾದ ರವಿಚಂದ್ರ ರವರು ಕನ್ನಡದ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಚಾಲನೆ ನೀಡಿದರು. ರಕ್ತದಾನ ಶಿಬಿರದಲ್ಲಿ 40 ಕ್ಕೂ ಹೆಚ್ಚು ದಾನಿಗಳು ರಕ್ತವನ್ನು ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ರಕ್ಷಣಾವೇದಿಕೆ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ಪೂಜಾರಿ, ತಾಲೂಕು ಅಧ್ಯಕ್ಷ ದೀಪಕ್, ಗೌರವ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಸುಜಿತ್, ಪ್ರದೀಪ್, ಪುರುಷೋತ್ತಮ್, ಪ್ರಶಾಂತ್, ರೋಹಿಲ್, ಶ್ರತೇಶ್, ನಮ್ಮ ಕೊಡಗು ತಂಡದ ಅಧ್ಯಕ್ಷ ನೌಶದ್ ಜನ್ನತ್ ಮತ್ತಿತರರು ಇದ್ದರು.