ಕೂಡಿಗೆ, ನ. 8: ಇಲ್ಲಿಗೆ ಸಮೀಪದ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂಗು ಗುಂಡಿ ಅಭಿಯಾನ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಆಡಳಿತ ಅಧಿಕಾರಿ ಅಣ್ಣಯ್ಯ ವಹಿಸಿದ್ದರು.
ಸರಕಾರದ ಹೊಸ ಯೋಜನೆಗಳನ್ನು ಗ್ರಾಮಸ್ಥರು ಬಳಕೆ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಿಸುವಿಕೆ ಮತ್ತು ಉದ್ಯೋಗ ಖಾತರಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಬರುತ್ತದೆ. ಇದರ ಸದುಪಯೋಗವನ್ನು ಗ್ರಾಮಸ್ಥರು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಪಡೆಯಬೇಕೆಂದು ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.