ನಾಪೆÇೀಕ್ಲು, ನ, 8: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ಜೆಡಿಎಸ್ ಜಿಲ್ಲಾಧ್ಯಕ್ಷರು ತೆಗೆದುಕೊಂಡ ಕ್ರಮ ಸರಿಯಾಗಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ಹೇಳಿದ್ದಾರೆ.
ಕುಶಾಲನಗರ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಪಕ್ಷದ ವಿಜೇತ ಅಭ್ಯರ್ಥಿಗಳು ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸಿರುವದರಿಂದ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇದನ್ನು ಜೆಡಿಎಸ್ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಸ್ವಾಗತಿಸುತ್ತೇವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.