ವೀರಾಜಪೇಟೆ, ನ. 7: ಮಹಾರಾಷ್ಟ್ರದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನವನ್ನು ಖಂಡಿಸಿ ಹಾಗೂ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಯುª Àಮೋರ್ಚಾದ ತಾಲೂಕು ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ವೀರಾಜಪೇಟೆಯ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಬಳಿಕ ಮೆರವಣಿಗೆಯ ಮೂಲಕ ಮಿನಿ ವಿಧಾನಸೌಧದ ಬಳಿ ತೆರಳಿ ತಹಶೀಲ್ದಾರ್ ನಂದೀಶ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಬಿಜೆಪಿಯ ಯುವಮೋರ್ಚಾದ ತಾಲೂಕು ಘಟಕದ ಅಧ್ಯಕ್ಷ ಸೋಮೆಯಂಡ ಕವನ್ ಕಾರ್ಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ತಾಲೂಕು ಘಟಕದ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಉಪಾಧ್ಯಕ್ಷ ಕುಪ್ಪಂಡ ಗಿರೀಶ್, ನಗರ ಘಟಕದ ಅಧ್ಯಕ್ಷ ಟಿ.ಪಿ.ಕೃಷ್ಣ, ಪಕ್ಷದ ಪ್ರಮುಖರಾದ ರೀನಾ ಪ್ರಕಾಶ್, ರಘು ನಾಣಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.