ಶನಿವಾರಸಂತೆ, ನ. 8: ಗೌಡಳ್ಳಿ ಗ್ರಾ.ಪಂ. ವ್ಯಾಪ್ತಿಯ ನವದುರ್ಗ ಪರಮೇಶ್ವರಿ ಸಮುದಾಯ ಭವನದಲ್ಲಿ ಶನಿವಾರಸಂತೆಯ ಕಂದಾಯ ಇಲಾಖೆಯ ವತಿಯಿಂದ ಪೌತಿ ಖಾತೆ ಆಂದೋಲನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗೌಡಳ್ಳಿ ಪಂಚಾಯಿತಿ ವ್ಯಾಪ್ತಿಯ ಸುಮಾರು 75 ಮಂದಿ ಗ್ರಾಮಸ್ಥರಿಗೆ ಈ ಬಗ್ಗೆ ಅರಿವು ಮೂಡಿಸಲಾಯಿತು.

ಸಭೆಯಲ್ಲಿ ಉಪತಹಶೀಲ್ದಾರ್ ಕೆ.ಜೆ. ಮಧುಸೂದನ್, ಕಂದಾಯ ಪರಿವೀಕ್ಷಕ ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿ ಜಟ್ಟೆಪ್ಪ, ಗ್ರಾಮ ಸಹಾಯಕರಾದ ಯೋಗೇಶ್, ಮಹೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.