ಕೂಡಿಗೆ, ನ. 7: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಮಲ್ಲೇನಹಳ್ಳಿ ಸೀಗೆಹೊಸೂರು ಭುವನಗಿರಿ ಗ್ರಾಮಗಳ ವ್ಯಾಪ್ತಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.
ಈ ವ್ಯಾಪ್ತಿಯ ಗ್ರಾಮಸ್ಥರು ನೀಡಿದ ಲಿಖಿತ ದೂರಿನ ಮೇರೆಗೆ ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ ಆಯಾ ಗ್ರಾಮಗಳಿಗೆ ಭೆÉೀಟಿ ನೀಡಿ ಪರಿಶೀಲಿಸಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಕುಡಿಯುವ ನೀರಿನ ವ್ಯವಸ್ಥೆಯನ್ನು ಗ್ರಾಮ ಪಂಚಾಯತಿ ಅನುದಾನದಲ್ಲಿ ನಿರ್ವಹಣೆ ಮಾಡಲಾಗುವುದು. ಮತ್ತು ವಿವಿಧ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಕ್ರಿಯಾ ಯೋಜನೆಗೆ ಅನುಗುಣವಾಗಿ ಪೂರ್ಣಗೊಳಿಸಲಾಗುವುದು. ಅಲ್ಲದೆ ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಸ್ಥಗಿತಗೊಂಡ ಕಾಮಗಾರಿಗಳನ್ನು ಮುಗಿಸಲಾಗುವುದು ಎಂದು ಜಯಣ್ಣ ತಿಳಿಸಿದರು. ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಗಿರಿಜನ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿ ಹಾಜರಿದ್ದರು.