ಸೋಮವಾರಪೇಟೆ, ನ. 8: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಿ.ಆರ್. ಈರಪ್ಪ ಅಧ್ಯಕ್ಷತೆಯಲ್ಲಿ ಪತ್ರಿಕಾಭವನದಲ್ಲಿ ನಡೆಯಿತು.
ಸಂಘದ ಸದಸ್ಯರು ಹಾಗೂ ಕೊರೊನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕಿಯರಾದ ಡಿ. ಕಮಲ, ಅನಿತಾ ಶೇಖರ್ ಹಾಗೂ ಲತಾ ರಾಮಚಂದ್ರ ಅವರುಗಳನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಡಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಆರ್.ಜಿ. ಬಸಪ್ಪ, ಖಜಾಂಚಿ ಎಂ.ಕೆ. ಸುಕುಮಾರ್ ಹಾಗೂ ಲೆಕ್ಕಪರಿಶೋಧಕ ಎ.ಕೆ. ಮಾಚಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.