ಮಡಿಕೇರಿ, ನ. 7: ಕೊಡಗು ಜಿಲ್ಲೆಯ ರಾಜಾಸೀಟು ಉದ್ಯಾನವನಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಸಮಗ್ರ ಉದ್ಯಾನವನಗಳ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.455 ಲಕ್ಷಗಳಿಗೆ ಕ್ರಿಯಾ ಯೋಜನೆಗೆ ಅನುಮೋದನೆಯಾಗಿದ್ದು, ಅದರಲ್ಲಿ ರೂ.369 ಲಕ್ಷಗಳನ್ನು ಲೋಕೋಪಯೋಗಿ ಇಲಾಖೆಗೆ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅದರಂತೆ ಲೋಕೋಪಯೋಗಿ ಇಲಾಖೆ ಅನುಮೋದಿತ ಅಂದಾಜು ಪಟ್ಟಿಯಂತೆ ಕಾಮಗಾರಿಯನ್ನು ಕೈಗೊಳ್ಳಲು ಟೆಂಡರ್ ಕರೆದು ಅನುಮೋದಿತ ಸಂಸ್ಥೆಗೆ ನೀಡಿದೆ.
ತಾ.7ರಂದು ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ, ಲೋಕೋಪಯೋಗಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದು, ವಿವರ ಇಂತಿದೆ :- ರಾಜಾಸೀಟು ಉದ್ಯಾನವನದ ಕಾಮಗಾರಿಯಲ್ಲಿ ಪೊದೆ ಸಸ್ಯಗಳಾದ (Shಡಿub), ಡ್ರೀಸಿನಾ, ಹೇಮೀಲಿಯಾ, ಕೇಶಿಯಾ, ಟಿಕೋಮಾ, ಸ್ಟೇಫೀಲಿರ ಇತ್ಯಾದಿ ಮಡಿಕೇರಿ, ನ. 7: ಕೊಡಗು ಜಿಲ್ಲೆಯ ರಾಜಾಸೀಟು ಉದ್ಯಾನವನಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಸಮಗ್ರ ಉದ್ಯಾನವನಗಳ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.455 ಲಕ್ಷಗಳಿಗೆ ಕ್ರಿಯಾ ಯೋಜನೆಗೆ ಅನುಮೋದನೆಯಾಗಿದ್ದು, ಅದರಲ್ಲಿ ರೂ.369 ಲಕ್ಷಗಳನ್ನು ಲೋಕೋಪಯೋಗಿ ಇಲಾಖೆಗೆ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅದರಂತೆ ಲೋಕೋಪಯೋಗಿ ಇಲಾಖೆ ಅನುಮೋದಿತ ಅಂದಾಜು ಪಟ್ಟಿಯಂತೆ ಕಾಮಗಾರಿಯನ್ನು ಕೈಗೊಳ್ಳಲು ಟೆಂಡರ್ ಕರೆದು ಅನುಮೋದಿತ ಸಂಸ್ಥೆಗೆ ನೀಡಿದೆ.
ತಾ.7ರಂದು ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ, ಲೋಕೋಪಯೋಗಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದು, ವಿವರ ಇಂತಿದೆ :- ರಾಜಾಸೀಟು ಉದ್ಯಾನವನದ ಕಾಮಗಾರಿಯಲ್ಲಿ ಪೊದೆ ಸಸ್ಯಗಳಾದ (Shಡಿub), ಡ್ರೀಸಿನಾ, ಹೇಮೀಲಿಯಾ, ಕೇಶಿಯಾ, ಟಿಕೋಮಾ, ಸ್ಟೇಫೀಲಿರ ಇತ್ಯಾದಿ ಉದ್ಯಾನವನದಲ್ಲಿ ಇಳಿಜಾರಿನಲ್ಲಿ ಮೆಟ್ಟಲುಗಳು ಹಾಗೂ ತಡೆಗೋಡೆಗಳನ್ನು ಎರಡು ಕಡೆ ನಿರ್ಮಿಸಲಾಗುವುದು. ಈಗಾಗಲೇ ಲಭ್ಯವಿರುವ ಉದ್ಯಾನವನದ ಎತ್ತರದ ಗುಡ್ಡದಲ್ಲಿ ಮೂಲ ಸ್ವರೂಪಗಳಿಗೆ ಧÀಕ್ಕೆಯಾಗದಂತೆ ಎರಡು ವೀಕ್ಷಣಾ ಗೋಪುರಗಳನ್ನು ಹಾಗೂ ಮಳೆ/ ಬಿಸಿಲಿನಲ್ಲಿ ವಿಶ್ರಾಂತಿಗಾಗಿ ಮೂರು ಅಲಂಕಾರಿಕ ಮಂಟಪಗಳನ್ನು ನಿರ್ಮಿಸಲಾಗುವುದು.
ಉದ್ಯಾನವನದ ವಿವಿಧ ಭಾಗಗಳಲ್ಲಿ ಅಲಂಕಾರಿಕ ಹೂವಿನ ಬಳ್ಳಿಗಳನ್ನು ಹಬ್ಬಿಸಲು ಕಲ್ಲಿನ ಎಂಟು ಪೆರ್ಗೊಲಾ (Peಡಿgoಟಚಿ) ಗಳನ್ನು ನಿರ್ಮಿಸಲಾಗುವುದು. ಉದ್ಯಾನವನದಲ್ಲಿ ನೈಸರ್ಗಿಕವಾಗಿರುವ ಪ್ರದೇಶದಲ್ಲಿ ಮಕ್ಕಳ ಸಣ್ಣ ಆಟದ ಉದ್ಯಾನವನ್ನು ನಿರ್ಮಿಸಲಾಗುವುದು.
ಉದ್ಯಾನವನದಲ್ಲಿ ಸಾರ್ವಜನಿಕರ ವಿಶ್ರಾಂತಿಗಾಗಿ 25 ಆಸನಗಳ ವ್ಯವಸ್ಥೆ ಹಾಗೂ ಮರದ ಸುತ್ತಲೂ ಕೂರಲು ಆಸನದ ವ್ಯವಸ್ಥೆ ಮಾಡÀಲಾಗುವುದು. ಉದ್ಯಾನವನದಲ್ಲಿ ಮಕ್ಕಳ ಮನೋರಂಜನೆಗಾಗಿ ವಿವಿಧ ಪ್ರಾಣಿಗಳ ಕಲಾಕೃತಿಗಳನ್ನು ಹಾಗೂ ಶಿಲ್ಪಕಲಾಕೃತಿಗಳನ್ನು ಅಳವಡಿಸಲಾಗುವುದು.
ವಿವಿಧ ಅಲಂಕಾರಿಕ ಹೂವಿನ ಕುಂಡಗಳು, ಕಸದ ಬುಟ್ಟಿ, ಸೂಚನಾ ಫಲಕಗಳು, ಪ್ರವಾಸಿ ಮಾಹಿತಿ ಫಲಕ ಇತ್ಯಾದಿಗಳನ್ನು ಅಳವಡಿಸಲಾಗುವುದು. ಅಲಂಕಾರಿಕ ವಿದ್ಯುತ್ ದೀಪ ಅಳವಡಿಕೆ, ನೀರಾವರಿ ಅಳವಡಿಕೆ ಹಾಗೂ ಸಿ.ಸಿ ಕ್ಯಾಮರವನ್ನು ಅಳವಡಿಸಲಾಗುವುದು.
ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದಂತೆ ರಾಜಾಸೀಟು ಉದ್ಯಾನವನದಲ್ಲಿ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಮಾಡಲುದ್ದೇಶಿಸಿದ್ದ ಎರಡು ಕೃತಕ ಕೆರೆಗಳು ಹಾಗೂ ಮೆಟ್ಟಲು ಸೇತುವೆಗಳನ್ನು ಕೈಬಿಡಲಾಗಿದೆ. ಉದ್ಯಾನವನದಲ್ಲಿ ಜೆಸಿಬಿ/ ಇಟಾಚಿ ಯಂತ್ರಗಳಿಂದ ಕಾಮಗಾರಿ ಮಾಡುವುದನ್ನು ಕೈಬಿಡಲಾಗಿದೆ. ಈ ಪ್ರದೇಶದಲ್ಲಿ ಮೂಲ ಸ್ವರೂಪವನ್ನು ಬದಲಾವಣೆ ಮಾಡದೆ ಯಾವುದೇ ಮರ ಗಿಡ ಕಟಾವು ಮಾಡದೆ ಲಭ್ಯವಿರುವ ಸ್ಥಳದಲ್ಲಿ ಸುಂದರವಾಗಿ ಕಾಮಗಾರಿ ಕೈಗೊಳ್ಳಲಾಗುವುದಾಗಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಸ್ಪಷ್ಟೀಕರಣ ನೀಡಿದ್ದಾರೆ.