ಮಡಿಕೇರಿ, ನ. 7: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2020-21 ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ 2020-21 ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10 ಸಾವಿರ ಶಿಷ್ಯವೇತನ ನೀಡಲಾಗುವುದು. ಅರ್ಜಿಯನ್ನು ಅಕಾಡೆಮಿಯ ಕಚೇರಿ ವೇಳೆಯಲ್ಲಿ (ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆವರೆಗೆ) ಉಚಿತವಾಗಿ ಪಡೆಯಬಹುದು. ಹಾಗೂ ಅಕಾಡೆಮಿ ಅಂತರ್ಜಾಲತಾಣ hಣಣಠಿs://ಞಚಿಡಿಟಿಚಿಣಚಿಞಚಿsಚಿಟಿgeeಣಚಿಟಿಡಿiಣಥಿಚಿ ಚಿಛಿಚಿಜemಥಿ.ಛಿom ಮೂಲಕ ಪಡೆದು ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಪಡೆಯಬಹುದು. ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ಸಹ ನೀಡಲಾಗಿದೆ. ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ.10 ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕಾಗಿ ಕೋರಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ತಿಳಿಸಿದ್ದಾರೆ.