ಪಾಲಿಬೆಟ್ಟ, ನ. 9: ಕೆರೆಯ ಬದಿಯಲ್ಲಿ ನಡೆದು ಹೋಗುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಾಲಿಬೆಟ್ಟ ಸಮೀಪ ಮೇಕೂರು ಬಳಿ ನಡೆದಿದೆ.

ಚೆನ್ನಯ್ಯನಕೋಟೆ ಹೂಲ ಮಾಳ ನಿವಾಸಿ ರಾಮು (65) ಮೃತ ದುರ್ದೈವಿ.

ಅಪ್ಪಯ್ಯ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕನಾಗಿದ್ದ ರಾಮು ಸಂಜೆ ಮನೆಗೆ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದರು.

ನುರಿತ ಈಜುಗಾರ ಸಹಕಾರ ದಿಂದ ಮೃತದೇಹವನ್ನು ಹೊರ ತೆಗೆದು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ನೀಡಲಾಗಿದ್ದು, ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ತಾ.ಪಂ. ಸದಸ್ಯ ಅಜಿತ್ ಕರುಂಬಯ್ಯ ಸೇರಿದಂತೆ ಮತ್ತಿತರರು ಭೇಟಿ ನೀಡಿದ್ದರು.