ಇಂದು ಉಪ ಚುನಾವಣೆ ಫಲಿತಾಂಶ

ಬೆಂಗಳೂರು, ನ.9 : ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತ ಎಣಿಕೆಗೆ ಸಿದ್ಧತೆ ಮುಕ್ತಾಯವಾಗಿದೆ. ಬಿಬಿಎಂಪಿ, ಪೆÇಲೀಸ್ ಇಲಾಖೆಯ ಭದ್ರತೆಯಲ್ಲಿ ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಬಿಜೆಪಿಯ ಮುನಿರತ್ನ, ಕಾಂಗ್ರೆಸ್ ನ ಕುಸುಮಾ ಹಾಗೂ ಜೆಡಿಎಸ್ ನ ಕೃಷ್ಣಮೂರ್ತಿ ಭವಿಷ್ಯ ಮಂಗಳವಾರ ಪ್ರಕಟವಾಗಲಿದೆ. ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಪೆÇಲೀಸ್ ಸರ್ಪಗಾವಲಿನಲ್ಲಿ ಮತ ಎಣಿಕೆ ನಡೆಯಲಿದೆ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಟಿ.ಬಿ.ಜಯಚಂದ್ರ ಹಾಗೂ ಬಿಜೆಪಿಯ ರಾಜೇಶ್ ಗೌಡ ರಾಜಕೀಯ ಭವಿಷ್ಯ ಕೂಡ ನಿರ್ಧಾರವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದ್ದು, ಮೊದಲು ಅಂಚೆ ಹಾಗೂ ಇಟಿಪಿಬಿಎಸ್ ಮತಗಳನ್ನ ಎಣಿಕೆ ಹಾಕಲಾಗುವುದು. ಇವಿಎಂ ಮತ ಎಣಿಕೆ ಬೆಳಗ್ಗೆ 8.30 ಕ್ಕೆಪ್ರಾರಂಭವಾಗಲಿದೆ.

ಕೆಎಎಸ್ ಡಾ.ಸುಧಾ ನಿವಾಸದಲ್ಲಿ 3.7 ಕೆಜಿ ಚಿನ್ನ

ಬೆಂಗಳೂರು, ನ.9 : ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿರುವ ಕೆಎಎಸ್ ಅಧಿಕಾರಿ ಡಾ.ಸುಧಾ ಅವರ ನಿವಾಸದಿಂದ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ಐಜಿಪಿ ಚಂದ್ರಶೇಖರ್ ಹೇಳಿದ್ದಾರೆ. ಇತ್ತೀಚೆಗೆ ಡಾ.ಸುಧಾ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು, ಉಡುಪಿ, ಮೈಸೂರು ಸೇರಿ ಒಟ್ಟು ಏಳು ಸ್ಥಳಗಳಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ 36.89 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದರು. ಬ್ಯಾಂಕ್ ಖಾತೆಯಲ್ಲಿ 3.5ಕೋಟಿ ರೂ. ಠೇವಣಿ ಹಾಗೂ 20ಕ್ಕೂ ಹೆಚ್ಚು ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಸ್ಥಿರಾಸ್ತಿ ಕ್ರಯ ಪತ್ರಗಳು, ಜಿಪಿಎ ಕರಾರುಗಳು, ಖರೀದಿ ಒಪ್ಪಂದ ಸೇರಿದಂತೆ 200 ಆಸ್ತಿ ಪತ್ರಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದರು.

ಕೊರೊನಾ ಮತ್ತೊಂದು ಹಂತಕ್ಕೆ ತಲುಪಿದೆ

ಬೊಸ್ಟೊನ್, ನ.9 : ಜಾಗತಿಕ ಮಟ್ಟದಲ್ಲಿ ಕೊರೋನಾ ವೈರಸ್ ಮತ್ತೊಂದು ಹಂತಕ್ಕೆ ತಲುಪಿದೆ. ಸಾಂಕ್ರಾಮಿಕ ಜಗತ್ತಿನಲ್ಲಿ ಕಾಣಿಸಿಕೊಂಡ ನಂತರ ಇದುವರೆಗೆ 50 ಮಿಲಿಯನ್ ಜನರು ಸೋಂಕಿತರಾಗಿದ್ದಾರೆ. ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯದ ವರದಿ ಪ್ರಕಾರ 50.2 ಮಿಲಿಯನ್ ಗಿಂತಲೂ ಅಧಿಕ ಮಂದಿ ಸೋಂಕಿತರಾಗಿದ್ದಾರೆ, 1.2 ಮಿಲಿಯನ್ ಗಿಂತಲೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಕೊಟ್ಟಿದೆ. ಅಮೆರಿಕ ಜಗತ್ತಿನ ಜನಸಂಖ್ಯೆಯಲ್ಲಿ ಶೇಕಡಾ 4ರಷ್ಟು ಹೊಂದಿದ್ದು, ಇದುವರೆಗೆ 9.8 ಮಿಲಿಯನ್ ಗಿಂತಲೂ ಅಧಿಕ ಮಂದಿ ಸೋಂಕಿತರಾಗಿದ್ದಾರೆ ಮತ್ತು 2 ಲಕ್ಷದ 37 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಜಾನ್ ಹಾಪ್ ಕಿನ್ಸ್ ವರದಿ ನೀಡಿದೆ. ಅಮೆರಿಕ ಸೇರಿದಂತೆ ಇನ್ನೂ ಹಲವು ಕಡೆಗಳಲ್ಲಿ ಕೊರೋನಾ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.

ಗೋಸ್ವಾಮಿಗೆ ಮಧ್ಯಂತರ ಜಾಮೀನು ಇಲ್ಲ

ಮುಂಬೈ, ನ.9 : 2018 ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. "ತನ್ನ ಅಸಾಮಾನ್ಯ ವ್ಯಾಪ್ತಿಯನ್ನು ಬಳಕೆ ಮಾಡುವುದಕ್ಕೆ ಕೋರ್ಟ್ ಎದುರು ಯಾವುದೇ ಸ್ಪಷ್ಟವಾದ ಕಾರಣಗಳಿಲ್ಲ" ಎಂದು ಅರ್ಜಿ ವಿಚಾರಣೆ ನಡೆಸಿರುವ ಎಸ್‍ಎಸ್ ಶಿಂಧೆ ಹಾಗೂ ಎಂಎಸ್ ಕರ್ಣಿಕ್ ಅವರಿದ್ದ ಪೀಠ ಹೇಳಿದೆ. ಅರ್ಜಿದಾರ ಅರ್ನಬ್ ಗೋಸ್ವಾಮಿ ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ಅರ್ಜಿ ಸಲ್ಲಿಸಿ ಸಾಮಾನ್ಯವಾದ ಜಾಮೀನನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹೈಕೋರ್ಟ್ ಹೇಳಿದೆ. ಅರ್ನಬ್ ಗೋಸ್ವಾಮಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಶನಿವಾರದಂದು ಕಾಯ್ದಿರಿಸಿತ್ತು. ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರದಂದು ಪ್ರಕಟಿಸಿರುವ ನ್ಯಾಯಾಲಯ, ಆರೋಪಿ ಸೆಷನ್ಸ್ ನ್ಯಾಯಾಲಯದಿಂದ ಸಾಮಾನ್ಯವಾದ ಜಾಮೀನನ್ನು ಪಡೆದುಕೊಳ್ಳುವುದನ್ನು ಹೈಕೋರ್ಟ್ ನಿರ್ಬಂಧಿಸುವುದಿಲ್ಲ ಎಂದು ಹೇಳಿದೆ.

ಚೆನ್ನೈನಲ್ಲಿ ಟಿವಿ ವರದಿಗಾರನ ಹತ್ಯೆ

ಚೆನ್ನೈ, ನ.9 : ಚೆನ್ನೈನ ಹೊರವಲಯದಲ್ಲಿ 26 ವರ್ಷದ ಟಿವಿ ವರದಿಗಾರನನ್ನು ಮೂವರು ದುಷ್ಕರ್ಮಿಗಳ ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿದೆ. ಪೆÇರಂಬೋಕ್ ಭೂಮಿಯ ಅಕ್ರಮವಾಗಿ ಮಾರಾಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಹತ್ಯೆಯಾದ ವರದಿಗಾರ ಜಿ ಮೊಸೆಸ್ ಅವರ ತಂದೆ ಹೇಳಿದ್ದಾರೆ. ಆದರೆ ವರದಿಗಾರನು ಈ ವಿಷಯವನ್ನು ವರದಿ ಮಾಡದಿರಲು ರಿಯಲ್ಟರ್ನಿಂದ ಲಂಚಕ್ಕೆ ಬೇಡಿಕೆ ಇಟ್ಟ ನಂತರ ಈ ಘಟನೆ ನಡೆದಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಕುಂದ್ರಾತೂರ್ನ ಸೋಮಂಗಲಂ ಬಳಿಯ ನಲ್ಲೂರು ಗ್ರಾಮದ ನಿವಾಸಿಯಾಗಿದ್ದ ಮೊಸೆಸ್, ತಮಿಳನ್ ಟಿವಿಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದರು. ಅವರ ತಂದೆ ಜ್ಞಾನರಾಜ್ ಯೇಸುದಾಸನ್ ಅವರು ಸಹ ತಮಿಳು ದಿನಪತ್ರಿಕೆಯ ವರದಿಗಾರರಾಗಿದ್ದಾರೆ.

ಪ್ರಿ ವೆಡ್ಡಿಂಗ್ ಫೆÇೀಟೋ ಶೂಟ್ : ಜೋಡಿ ಸಾವು

ಮೈಸೂರು, ನ.9 : ಪ್ರಿ ವೆಡ್ಡಿಂಗ್ ಫೆÇೀಟೋಶೂಟ್ ಮಾಡಿಸಲು ಹೋದ ನವಜೋಡಿ ತೆಪ್ಪ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ತಲಕಾಡಿನಲ್ಲಿ ನಡೆದಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾಗಿದ್ದ ಚಂದ್ರು ಮತ್ತು ಶಶಿಕಲಾ ಮದುವೆ ನಿಶ್ಚಯವಾಗಿತ್ತು. ಅಂತೆಯೇ ನ.22ರಂದು ಮದುವೆ ಮಾಡಲು ಕುಟುಂಬಸ್ಥರು ತಯಾರಿ ಕೂಡ ನಡೆಸಿದ್ದರು. ಆದರೆ ಚಂದ್ರು ಮತ್ತು ಶಶಿಕಲಾ ಪ್ರಿ ವೆಡ್ಡಿಂಗ್ ಫೆÇೀಟೋಶೂಟ್ ಮಾಡಿಸಲು ಮನೆಯವರಿಗೆ ಹೇಳದೇ ಮೈಸೂರಿನ ತಲಕಾಡಿನ ಮುಡುಕುತೊರೆ ಗ್ರಾಮದಲ್ಲಿ ಹರಿಯುವ ಕಾವೇರಿ ನದಿಗೆ ಹೋಗಿದ್ದಾರೆ. ಮುಡುಕುತೊರೆಯ ಕಾವೇರಿ ನದಿಯಲ್ಲಿ ತೆಪ್ಪವನ್ನು ತೆಗೆದುಕೊಂಡು ಮಧ್ಯಭಾಗದಲ್ಲಿ ಫೆÇೀಟೋಶೂಟ್ ಮಾಡಿಸಲು ತೆರೆಳಿದ್ದಾರೆ. ಈ ವೇಳೆ ತೆಪ್ಪ ಮುಳುಗಿ ನವಜೋಡಿಗಳಿಬ್ಬರು ನೀರುಪಾಲಾಗಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೆÇಲೀಸರು ಕಾರ್ಯಾಚರಣೆ ಮಾಡಿ ಇಬ್ಬರ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಈ ಸಂಬಂಧ ತಲಕಾಡು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.