ಮಡಿಕೇರಿ, ನ. 10: ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪದವಿ ಪರೀಕ್ಷೆಯ ಮೌಲ್ಯಮಾಪನ ಕೇಂದ್ರವನ್ನು ಪ್ರಥಮ ಬಾರಿಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಸ್. ಎಡಪಡಿತಾಯ ಮತ್ತು ಪರೀಕ್ಷಾಂಗ ಕುಲಸಚಿವ ಡಾ. ಪಿ.ಎಲ್. ಧರ್ಮ ಮಡಿಕೇರಿಯಲ್ಲಿ ಮಾಡಲು ಅನುಮತಿ ನೀಡಿದ್ದಾರೆ.
ಅಂತಿಮ ಪದವಿಯ ಎಲ್ಲಾ ವಿಷಯಗಳ ಮೌಲ್ಯಮಾಪನ ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಫಲಿತಾಂಶವು ಹೊರಬೀಳಲಿದೆ ಎಂದು ಪರೀಕ್ಷಾಂಗ ಕುಲಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಡಿಕೇರಿ ಎಫ್.ಎಂ.ಸಿ. ಕಾಲೇಜಿನ ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ ಸಂಯೋಜಕ ಎಂ.ಎನ್. ರವಿಶಂಕರ್, ಇತಿಹಾಸ ವಿಷಯದ ಸಂಯೋಜಕ ಮೇಜರ್ ಡಾ. ಬಿ. ರಾಘವ್, ಅರ್ಥಶಾಸ್ತ್ರದ ಪ್ರಾಧ್ಯಾಪಕ ಡಾ. ತಿಪ್ಪೇಸ್ವಾಮಿ, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಶಹಬರ್ ಪಾಷ ಹಾಗೂ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ರಂಗಪ್ಪ ಮತ್ತು ಜಿಲ್ಲೆಯ ವಿವಿಧ ಕಾಲೇಜಿನಿಂದ ಆಗಮಿಸಿದ ಪ್ರಾಧ್ಯಾಪಕರು ಮೌಲ್ಯಮಾಪನದಲ್ಲಿ ಪಾಲ್ಗೊಂಡಿದ್ದರು.