ಕುಶಾಲನಗರ, ನ. 11: ಕುಶಾಲನಗರ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಯವರ್ಧನ್ ಮತ್ತು ಉಪಾಧ್ಯಕ್ಷೆ ಸುರಯ್ಯಬಾನು ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ನೇತೃತ್ವದಲ್ಲಿ ಪದಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿ ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸಲು ಮನವಿ ಮಾಡಿದರು.
ಈ ಸಂದರ್ಭ ಕರವೇ ಪದಾಧಿಕಾರಿಗಳಾದ ನಾಗೇಗೌಡ, ಹರೀಶ್ ಮತ್ತಿತರರು ಇದ್ದರು.