ನಾಪೋಕ್ಲು, ನ. 10: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಹೆಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಇಲ್ಲಿಗೆ ಸಮೀಪದ ಕೊಟ್ಟಮುಡಿಯಲಿ ಜರುಗಿದೆ. ಪಾಲೂರು ಗ್ರಾಮದ ಕೊಟ್ಟಮುಡಿ ನಿವಾಸಿ ಕೆ.ಎಂ. ತಾಜುದ್ದೀನ್ ಎಂಬವರು ತಮ್ಮ ತಾಯಿಯ ಚಿಕಿತ್ಸೆಗೆಂದು ಮೈಸೂರಿಗೆ ತೆರಳಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಳ್ಳತನ ನಡೆದಿದೆ. ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯ ಹೆಂಚು ತೆಗೆದು ಒಳನುಗ್ಗಿರುವ ಕಳ್ಳರು ಕಪಾಟಿನಲ್ಲಿದ್ದ 50ಗ್ರಾಂ. ಚಿನ್ನಾಭರಣ ಕಳವು ಮಾಡಿರುವುದು ತಿಳಿದು ಬಂದಿದೆ. ಪ್ರಕರಣ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಸ್ಥಳಕ್ಕೆ ವೃತ್ತ ನಿರೀಕ್ಷಕ ದಿವಾಕರ್, ಠಾಣಾಧಿಕಾರಿ ಆರ್. ಕಿರಣ್, ಬೆರಳಚ್ಚು ತಜ್ಞರು, ಶ್ವಾನದಳದವರು ಪರಿಶೀಲಿಸಿ ಕಾನೂನು ಕ್ರಮಕೈಗೊಂಡಿದ್ದಾರೆ.