ಮಡಿಕೇರಿ, ನ. 10: ಜಿಲ್ಲೆಯಲ್ಲಿ ತಾ. 10 ರಂದು ಹೊಸದಾಗಿ 16 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 76,003 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,092 ಮಂದಿಗೆ ಸೋಂಕು ತಗುಲಿದೆ.
ಈ ಪೈಕಿ 4,873 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 69 ಮಂದಿ ಸಾವನ್ನಪ್ಪಿದ್ದು 150 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 28 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 11 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 111 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 122 ನಿಯಂತ್ರಿತ ವಲಯಗಳಿವೆ.