ಮಡಿಕೇರಿ, ನ. 10: ಶಾಲೆ ಮತ್ತು ಅಂಗನವಾಡಿ ಉದ್ಯಾನವನಗಳ ಉದ್ಘಾಟನಾ ಕಾರ್ಯಕ್ರಮವು ತಾ. 12 ರಂದು (ನಾಳೆ) ಬೆಳಿಗ್ಗೆ 10.30 ಗಂಟೆಗೆ ಮೇಕೇರಿಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರ ಉಪಸ್ಥಿತಿಯಲ್ಲಿ ಮೇಕೇರಿ ಮತ್ತು ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಕೇಂದ್ರ ಪುರಸ್ಕøತ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿರುವ ಮೇಕೇರಿ ಸುಭಾಷ್‍ನಗರ ಅಂಗನವಾಡಿ ಕೇಂದ್ರದ ಉದ್ಯಾನವನ, ಮೇಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಉದ್ಯಾನವನ, ಹಾಕತ್ತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಉದ್ಯಾನವನ ಮತ್ತು ಬಿಳಿಗೇರಿ ಗ್ರಾಮದ ಹಾಕತ್ತೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಿರ್ಮಿಸಿರುವ ಉದ್ಯಾನವನಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮೇಕೇರಿ ಗ್ರಾ.ಪಂ.ಆಡಳಿತಾಧಿಕಾರಿ ತಿಳಿಸಿದ್ದಾರೆ.