ಮಡಿಕೇರಿ, ನ. 11: ವೀರಾಜಪೇಟೆ ತಾಲೂಕು ಬಾಳೆಲೆ ಹೋಬಳಿಗೆ ಸಂಬಂಧಿಸಿದಂತೆ ಪೌತಿ ಖಾತೆ ಆಂದೋಲನವನ್ನು ತಾ. 13 ರಂದು ಮಧ್ಯಾಹ್ನ 2 ಗಂಟೆಗೆ ಮಾಯಮುಡಿ ಗ್ರಾಮ ಪಂಚಾಯಿತಿಯಲ್ಲಿ ತಾ. 18 ರಂದು ಬಾಳೆಲೆ ಗ್ರಾಮ ಪಂಚಾಯಿತಿಯಲ್ಲಿ, ತಾ. 20 ರಂದು ನಿಟ್ಟೂರು ಗ್ರಾಮ ಪಂಚಾಯಿತಿಯಲ್ಲಿ, ತಾ. 24 ರಂದು ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿಯಲ್ಲಿ ಪೂರ್ವಾಹ್ನ 11 ಗಂಟೆಗೆ ನಡೆಸಲು ನಿರ್ಧರಿಸಲಾಗಿದೆ.