ಮಡಿಕೇರಿ, ನ. 11: 2019 ರ ಪ್ರಕೃತಿ ವಿಕೋಪದಿಂದ ಬೆಟ್ಟಗೇರಿಯ ಅಶ್ರಫ್ ಅವರ ಮನೆಯ ಹಿಂಬದಿ ಬರೆ ಜರಿದು ಅಪಾಯಕಾರಿ ಸ್ಥಿತಿಯಲ್ಲಿದ್ದು, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರ ಅನುದಾನದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಇಂದು ಸ್ಥಳಕ್ಕೆ ಭೇಟಿ ನೀಡಿದ್ದ ವೀಣಾ ಅಚ್ಚಯ್ಯ ಅವರು ಕಾಮಗಾರಿ ವೀಕ್ಷಣೆ ಮಾಡಿದರು. ಈ ಸಂದರ್ಭ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಬೆಟ್ಟಗೇರಿ ಮೊಯ್ದು ಉಪಸ್ಥಿತರಿದ್ದರು.