ಬೆಂಗಳೂರು, ನ. 10: ರಾಜ್ಯ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಶಾಸಕರನ್ನು ನೇಮಕ ಮಾಡಲಾಗಿದೆ. ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸದಸ್ಯರಾಗಿ, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅರ್ಜಿಗಳ ಸಮಿತಿ ಸದಸ್ಯರಾಗಿ ಹಾಗೂ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸದಸ್ಯೆಯಾಗಿ ನಿಯೋಜಿತರಾಗಿದ್ದಾರೆ.