ಮಡಿಕೇರಿ, ನ. 12: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಸುದೀರ್ಘ ಸೇವೆ ಸಲ್ಲಿಸಿರುವ ಹಿರಿಯ ಸಹಕಾರಿ ಮಾತಂಡ ರಮೇಶ್ ಅವರಿಗೆ ಪ್ರಸಕ್ತ ಸಾಲಿನಲ್ಲಿ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಶಿಫಾರಸ್ಸು ಮೇರೆಗೆ ಮಾತಂಡ ರಮೇಶ್ ಪ್ರಶಸ್ತಿಗೆ ಭಾಜನರಾಗಿದ್ದು, ತಾ. 14 ರಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಅವರು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಂದ ಈ ಪುರಸ್ಕಾರ ಪಡೆಯಲಿದ್ದಾರೆ.