ಮಡಿಕೇರಿ, ನ. 12: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ, 2020 ರ ಮಾರ್ಚ್ ಮಾಹೆಯಲ್ಲಿ ನಡೆಸಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಸಂಯೋಜನೆಗಳಲ್ಲಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಪಡೆದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮವು ತಾ. 13 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಲ್ಯಾಪ್ಟಾಪ್ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಸೇವೆಯಿಂದ ವಯೋನಿವೃತ್ತಿ ಹೊಂದಿರುವ ನಿವೃತ್ತ ಉಪ ನಿರ್ದೇಶಕರು ಹಾಗೂ ಪ್ರಾಂಶುಪಾಲರುಗಳ ಸನ್ಮಾನ ಕಾರ್ಯಕ್ರಮವು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಏರ್ಪಾಡಿಸಲಾಗಿದೆ. ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ ಹಾಗೂ ಐಟಿಡಿಪಿ ಇಲಾಖಾ ಯೋಜನಾಧಿಕಾರಿ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ ತಿಳಿಸಿದ್ದಾರೆ.