ಮಡಿಕೇರಿ, ನ. 12: ತಲಕಾವೇರಿಯಲ್ಲಿ ಕಳೆದ ಆಗಸ್ಟ್‍ನಲ್ಲಿ ಗಜಗಿರಿ ಬೆಟ್ಟ ಕುಸಿದು ಅನಾಹುತ ಸಂಭವಿಸಲು ಕಾರಣವಾಗಿರುವ ಇಂಗು ಗುಂಡಿಗಳನ್ನು ಅರಣ್ಯ ಇಲಾಖೆ ತಕ್ಷಣ ಮುಚ್ಚದಿದ್ದಲ್ಲಿ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಅರಣ್ಯ ಭವನದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.

ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ವರ್ಷ ಗಜಗಿರಿ ಬೆಟ್ಟ ಕುಸಿದು ಅರ್ಚಕ ಕುಟುಂಬ ಅಸುನೀಗಲು ಅರಣ್ಯ ಇಲಾಖೆ ನಿರ್ಮಿಸಿರುವ ಇಂಗು ಗುಂಡಿಗಳೇ ಕಾರಣವಾಗಿದ್ದು, ಮಡಿಕೇರಿ, ನ. 12: ತಲಕಾವೇರಿಯಲ್ಲಿ ಕಳೆದ ಆಗಸ್ಟ್‍ನಲ್ಲಿ ಗಜಗಿರಿ ಬೆಟ್ಟ ಕುಸಿದು ಅನಾಹುತ ಸಂಭವಿಸಲು ಕಾರಣವಾಗಿರುವ ಇಂಗು ಗುಂಡಿಗಳನ್ನು ಅರಣ್ಯ ಇಲಾಖೆ ತಕ್ಷಣ ಮುಚ್ಚದಿದ್ದಲ್ಲಿ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಅರಣ್ಯ ಭವನದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.

ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ವರ್ಷ ಗಜಗಿರಿ ಬೆಟ್ಟ ಕುಸಿದು ಅರ್ಚಕ ಕುಟುಂಬ ಅಸುನೀಗಲು ಅರಣ್ಯ ಇಲಾಖೆ ನಿರ್ಮಿಸಿರುವ ಇಂಗು ಗುಂಡಿಗಳೇ ಕಾರಣವಾಗಿದ್ದು, ಒತ್ತಾಯಿಸಿದರು.

ಬೆಟ್ಟದ ಮೇಲೆ ಸುಮಾರು 5,400 ಇಂಗು ಗುಂಡಿಗಳನ್ನು ತೆಗೆದಿದ್ದು, ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವ ಬಗ್ಗೆ ಶಂಕೆಯಿದೆಯೆಂದು ಆರೋಪಿಸಿದರು. ಇಂಗು ಗುಂಡಿಗಳನ್ನು ಮುಚ್ಚದಿದ್ದಲ್ಲಿ ಮುಂದಿನ ವರ್ಷ ಬ್ರಹ್ಮಗಿರಿ ಬೆಟ್ಟಕ್ಕೂ ಅಪಾಯ ಎದುರಾಗಲಿದೆ. ಒಂದು ವೇಳೆ ಅನಾಹುತ

(ಮೊದಲ ಪುಟದಿಂದ) ಸಂಭವಿಸಿದರೆ ಅರ್ಧ ಭಾಗಮಂಡಲ ಗ್ರಾಮ ನಿರ್ನಾಮವಾಗುವ ಸಾಧ್ಯತೆಗಳಿದೆ ಎಂದು ಗಣೇಶ್ ಆತಂಕ ವ್ಯಕ್ತಪಡಿಸಿದರು.

ಪವಿತ್ರ ಕ್ಷೇತ್ರ ಭಾಗಮಂಡಲದಲ್ಲಿ ಸಾವಿರಾರು ಇಂಗು ಗುಂಡಿಗಳನ್ನು ಅರಣ್ಯ ಇಲಾಖೆ ನಿರ್ಮಿಸುತ್ತಿದ್ದಾಗ ಜಿಲ್ಲೆಯ ಇಬ್ಬರು ಶಾಸಕರು ಹಾಗೂ ಪರಿಸರವಾದಿಗಳು ಜಾಣ ಮೌನಕ್ಕೆ ಶರಣಾಗಿದ್ದು ಏಕೆ ಎಂದು ಅವರು ಪ್ರಶ್ನಿಸಿದರು. ಸ್ಥಳೀಯ ಜನರ ಅಭಿಪ್ರಾಯ ಮತ್ತು ಜಿಲ್ಲಾಡಳಿತದ ಅನುಮತಿ ಪಡೆಯದೆ ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಜೆಸಿಬಿ ಯಂತ್ರಗಳ ಮೂಲಕ ಬೆಟ್ಟದಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸಿ ಅನಾಹುತಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

250 ರಿಂದ 300 ಇಂಚು ಮಳೆ ಬೀಳುವ ಈ ಪ್ರದೇಶದಲ್ಲಿ ಇಂಗು ಗುಂಡಿ ನಿರ್ಮಾಣದಿಂದ ಬೆಟ್ಟ ಕುಸಿಯುವ ಸಾಧ್ಯತೆಯೇ ಹೆಚ್ಚೆಂದು ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್ ವಿಶ್ಲೇಷಿಸಿದರು.

ಶಿವಲಿಂಗ ವಿಸರ್ಜಿಸಿ

ತಲಕಾವೇರಿಯಲ್ಲಿರುವ ಅಗಸ್ತ್ಯ ಮುನಿಗಳು ಸ್ಥಾಪಿಸಿದ ಹಾನಿಗೀಡಾದ ಶಿವಲಿಂಗವನ್ನು ಎಲ್ಲೋ ಒಂದು ಕಡೆ ಇಟ್ಟು ನಿರ್ಲಕ್ಷಿಸಿರುವುದು ಸರಿಯಾದ ಕ್ರಮವಲ್ಲ. ತಕ್ಷಣ ಆಡಳಿತ ವ್ಯವಸ್ಥೆ ಲಿಂಗವನ್ನು ಪುನÀರ್ ಪ್ರತಿಷ್ಠಾಪಿಸ ಬೇಕೋ ಅಥವಾ ವಿಸರ್ಜಿಸಬೇಕೋ ಎನ್ನುವ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬಂದು ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಅನಾಹುತಗಳು ಸಂಭವಿಸಬಹುದೆಂದು ವಿಶ್ವನಾಥ್ ಆತಂಕ ವ್ಯಕ್ತಪಡಿಸಿದರು. ದೋಷ ನಿವಾರಣೆಗೆ ಸಂಬಂಧಿಸಿದವರು ಮುಂದಾಗಬೇಕೆಂದು ಗಣೇಶ್ ಮನವಿ ಮಾಡಿದರು.

ರಾಜಾಸೀಟ್‍ನಲ್ಲಿ ಕಾಮಗಾರಿ ಬೇಡ

ನೈಜ ಪ್ರ್ರಾಕೃತಿಕ ಸೌಂದರ್ಯಕ್ಕೆ ಹೆಸರಾದ ರಾಜಾಸೀಟ್ ಉದ್ಯಾನವನದಲ್ಲಿ ಕೂಡ ಯಂತ್ರಗಳನ್ನು ಬಳಸಿ ಬೆಟ್ಟವನ್ನು ಕೊರೆಯಲಾಗುತ್ತಿದೆ. ಅಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗಣೇಶ್ ಸಲಹೆಯಿತ್ತರು.

ಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಣೇಶ್, ಮಡಿಕೇರಿ ತಾಲೂಕು ಜೆಡಿಎಸ್ ಅಧ್ಯಕ್ಷ ಬಲ್ಲಚಂಡ ಗೌತಮ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ. ಮಂಜುನಾಥ್ ಹಾಗೂ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ ಉಪಸ್ಥಿತರಿದ್ದರು.