ನಾಪೆÇೀಕ್ಲು, ನ. 12: ದೇಶ ಸೇವೆ ಮಾಡಿದ ಮಾಜಿ ಸೈನಿಕರನ್ನು ಸರಕಾರ ನಿರ್ಲಕ್ಷ್ಯಿಸುತ್ತಿದೆ ಎಂದು ನಾಪೆÇೀಕ್ಲು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಾಡೆಯಂಡ ಶಂಭು ಆರೋಪಿಸಿದ್ದಾರೆ.
ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಪೆÇೀಕ್ಲು ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾಜಿ ಸೈನಿಕರ ಸಮಸ್ಯೆಗಳನ್ನು ಸರಕಾರ ಆಲಿಸುತ್ತಿಲ್ಲ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರ ಕುಟುಂಬವನ್ನು ಕೂಡ ಸರಕಾರ ನಿರ್ಲಕ್ಷ್ಯಿಸುತ್ತಿದೆ. ಸೈನಿಕರಿಗೆ ಜಾಗ ಮಂಜೂರು ಮಾಡಲು ಸರಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಅವರು ದೂರಿದರು. ಚುನಾಯಿತ ಜನಪ್ರತಿನಿಧಿಗಳು ಚುನಾವಣೆಯಲ್ಲಿ ಗೆದ್ದ ನಂತರ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹಣ ಗಳಿಸುವ ಖಾತೆಯನ್ನು ಹೊಂದುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ ಎಂದು ಹೇಳಿದರು. ಆದುದರಿಂದ ಮಾಜಿ ಸೈನಿಕರ ಹಾಗೂ ಅವರ ಕುಟುಂಬದವರ ಅಭಿವೃದ್ಧಿಗೆ ಸರಕಾರ ಸಹಕರಿಸಬೇಕೆಂದು ಈ ಸಂದರ್ಭ ಅವರು ಒತ್ತಾಯಿಸಿದರು.
ವೇದಿಕೆಯಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಕೇಟೋಳಿರ ಡಾಲಿ ಅಚ್ಚಪ್ಪ ವಾರ್ಷಿಕ ವರದಿ ವಾಚಿಸಿದರು. ಉಪಾಧ್ಯಕ್ಷ ಕೊಂಡಿರ ನಾಣಯ್ಯ ಸ್ವಾಗತಿಸಿ, ವಂದಿಸಿದರು.