ಮಡಿಕೇರಿ, ನ. 12: ವೀರಾಜಪೇಟೆ ಕಾವೇರಿ ಕಾಲೇಜಿನ ಉಪನ್ಯಾಸಕಿ ಮುಲ್ಲೇಂಗಡ ರೇವತಿ ಪೂವಯ್ಯ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಲಭಿಸಿದೆ. ಇತ್ತೀಚೆಗೆ ಹಂಪಿ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ನಡೆದ 28ನೇ ನುಡಿಹಬ್ಬ ಘಟಿಕೋತ್ಸವದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು ಹಾಗೂ ಸಮಕುಲಾಧಿಪತಿಗಳಾದ ಡಾಕ್ಟರ್ ಸಿ.ಎನ್. ಅಶ್ವಥ್ ನಾರಾಯಣ ಅವರಿಂದ ಕುಲಪತಿಗಳಾದ ಸ.ಚಿ. ರಮೇಶ್ ಅವರ ಸಮ್ಮುಖದಲ್ಲಿ ಪದವಿ ಪ್ರಮಾಣ ಪತ್ರ ಪಡೆದುಕೊಂಡರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಹೆಬ್ಬಾಲೆ ಕೆ. ನಾಗೇಶ್ ಅವರ ಮಾರ್ಗದರ್ಶನದಲ್ಲಿ ‘ಕೊಡಗಿನ ತೆರೆ ಕಟ್ಟುವ ಆಚರಣೆಗಳ ವಿಶ್ಲೇಷಣೆ’ ಎಂಬ ವಿಷಯದಲ್ಲಿ ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಲಾಗಿದೆ. ಇವರು ವೀರಾಜಪೇಟೆ ತಾಲೂಕು 2ನೇ ರುದ್ರಗುಪ್ಪೆ ಗ್ರಾಮದ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರ ಪತ್ನಿ.