ಮಡಿಕೇರಿ, ನ. 12: ಜಿಲ್ಲೆಯಲ್ಲಿ ತಾ. 12 ರಂದು ಹೊಸದಾಗಿ 8 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 77,292 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,122 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,935 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 70 ಮಂದಿ ಸಾವನ್ನಪ್ಪಿದ್ದು 117 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 23 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 2 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 92 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 119 ನಿಯಂತ್ರಿತ ವಲಯಗಳಿವೆ.