ಮಡಿಕೇರಿ, ನ. 13 : ಸ್ನಾತಕೋತ್ತರ ಹಾಗೂ ಪದವಿಯ ಅಂತಿಮ ವರ್ಷದ ತರಗತಿಗಳು ಇದೇ ತಾ. 17 ರಿಂದ ಆರಂಭವಾಗಲಿದ್ದು, ಆ ನಿಟ್ಟಿನಲ್ಲಿ ಈ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಆರ್‍ಟಿಪಿಸಿಆರ್ ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಕೊಂಡು ಕಾಲೇಜಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಡಳಿತ ಭವನದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ತರಗತಿ ಆರಂಭ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಕಾಲೇಜುಗಳ ಪ್ರಾಂಶುಪಾಲರ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಸರ್ಕಾರ ಸ್ನಾತಕೋತ್ತರ ಮತ್ತು ಪದವಿ ಹಂತದ ಅಂತಿಮ ವರ್ಷದ ತರಗತಿಯನ್ನು ಆರಂಭಿಸಲು ನಿರ್ದೇಶನ ನೀಡಿದ್ದು, ಅದರಂತೆ ಕ್ರಮ ವಹಿಸಬೇಕಿದೆ. ಆ ದಿಸೆಯಲ್ಲಿ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಕಾಲೇಜಿಗೆ ಆಗಮಿಸುವ 3 ದಿನದೊಳಗಿನ ಆರ್‍ಟಿಪಿಸಿಆರ್ ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರ ತರಬೇಕು ಎಂದರು.

ಜಿಲ್ಲೆಯ ವಿದ್ಯಾರ್ಥಿಗಳು ಹತ್ತಿರದ ಪ್ರಾಥಮಿಕ ಮತ್ತು

(ಮೊದಲ ಪುಟದಿಂದ) ಸಮುದಾಯ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಬಹುದಾಗಿದೆ. ಹೊರ ಜಿಲ್ಲೆಯ ವಿದ್ಯಾರ್ಥಿಗಳು ಅಲ್ಲಿನ ಹತ್ತಿರದ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಪ್ರಮಾಣಪತ್ರ ತರಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.

ಜಿಲ್ಲೆಯ ಅಗತ್ಯವಿರುವ ಕಡೆ ಕೋವಿಡ್ ಪರೀಕ್ಷೆ ನಡೆಸಲು ಸಂಚಾರಿ ತಂಡವನ್ನು ಕಳಿಸಿಕೊಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸಲಹೆ ಮಾಡಿದರು.

ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು, ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರಿಗೆ ತಕ್ಷಣವೇ ಕೋವಿಡ್ ಪರೀಕ್ಷೆ ನಡೆಸಲು ಸಂಚಾರಿ ತಂಡವನ್ನು ಕಳಿಸಿಕೊಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸಲಹೆ ಮಾಡಿದರು.

ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು, ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರಿಗೆ ತಕ್ಷಣವೇ ಉಪನ್ಯಾಸಕರು ಮತ್ತು ಸಿಬ್ಬಂದಿಗಳಿಗೆ ಆರ್‍ಟಿಪಿಸಿಆರ್ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಲಸಿಕಾಧಿಕಾರಿ ಡಾ.ಗೋಪಿನಾಥ್, ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ.ಎಸ್.ವಿ ಅಪ್ಪಾಜಿ ಗೌಡ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ನೋಡಲ್ ಅಧಿಕಾರಿ ಕೆ.ಸಿ.ದಯಾನಂದ, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ, ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರು ಇತರರು ಇದ್ದರು.