ಸೋಮವಾರಪೇಟೆ, ನ. 13: ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ಕಾರ್ಯನಿರ್ವಹಣಾ ಸಮಿತಿಯ ವತಿಯಿಂದ ಶ್ರಮದಾನ ನಡೆಯಿತು.
ಶಾಲಾ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿದ ಕಾರ್ಯಕರ್ತರು, ಶಾಲೆಯ ಸುತ್ತಮುತ್ತಲ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ವಿಪತ್ತು ಕಾರ್ಯನಿರ್ವಹಣಾ ಸಮಿತಿಯ ಅಧ್ಯಕ್ಷ ರವಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಆರ್. ಸತೀಶ್, ಶಾಲಾ ಶಿಕ್ಷಕರು, ನಿರ್ವಹಣಾ ಸಮಿತಿಯ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.