ಮಡಿಕೇರಿ, ನ. 13: ಗುರುಕುಲ ಕಲಾಪ್ರತಿಷ್ಠಾನ ಕೊಡಗು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಛದ್ಮವೇಷ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸ್ಪರ್ಧೆಯಲ್ಲಿ ಮೂವತ್ತಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ತಾ. 14ರಂದು (ಇಂದು) ಸ್ಪರ್ಧೆಯ ಫಲಿತಾಂಶದೊಂದಿಗೆ ವಿಜೇತರಿಗೆ ಪುಸ್ತಕ ಬಹುಮಾನ ಹಾಗೂ ಎಲ್ಲಾ ಮಕ್ಕಳಿಗೂ ಪ್ರಶಸ್ತಿಪತ್ರ ನೀಡಿ ಗೌರವಿಸಿ ಪ್ರೋತ್ಸಾಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.