ಮಡಿಕೇರಿ, ನ. 13: 7ನೇ ಹೊಸಕೋಟೆ ಗ್ರಾಮದ ಭಾಗ-1 ರಲ್ಲಿ ಬಿಜೆಪಿ ಪಕ್ಷದಿಂದ ಬೂತ್ ಮಟ್ಟದ ಸಭೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಭಾಗ-1ರ ಅಧ್ಯಕ್ಷ ಪ್ರಕಾಶ್ ಟಿ.ವಿ. (ಉಣ್ಣಿ) ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಜೆಪಿ ತಾಲೂಕು ಕಾರ್ಯದರ್ಶಿ ಗೌತಮ್ ಎಂ.ಎಲ್. ಆಗಮಿಸಿದ್ದರು. ಸಭೆಯಲ್ಲಿ ಪಂಚರತ್ನ ಸಮಿತಿಯನ್ನು ರಚಿಸಲಾಯಿತು.
ಸಭೆಯನ್ನುದ್ದೇಶಿಸಿ ಗೌತಮ್ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟರು. ಸಭೆಯಲ್ಲಿ ಶಕ್ತಿ ಕೇಂದ್ರ ಪ್ರಮುಖ ರಾಮಚಂದ್ರ ಎ., ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸದಸ್ಯ ವಿಜು, ಮಾಜಿ ಪಂಚಾಯಿತಿ ಅಧ್ಯಕ್ಷೆ ಸುಮಲತಾ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.