ಸೋಮವಾರಪೇಟೆ, ನ. 13: ಇಲ್ಲಿನ ನ್ಯಾಯಾಲಯದಲ್ಲಿ ಡಿಸೆಂಬರ್ 19ರಂದು ಲೋಕ ಅದಾಲತ್ ಏರ್ಪಡಿಸಿರುವ ಸಂಬಂಧ ನ್ಯಾಯಾಲಯ ಸಭಾಂಗಣದಲ್ಲಿ ವಿವಿಧ ಇಲಾಖಾಧಿಕಾರಿಗಳನ್ನು ಒಳಗೊಂಡಂತೆ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ದಿಂಡಲಕೊಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಅವರುಗಳು ಉಪಸ್ಥಿತರಿದ್ದು ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಇತ್ಯರ್ಥವಾಗು ವಂತಹ ದಾವೆಗಳಿದ್ದರೆ ಡಿ. 19 ರಂದು ನಡೆಯುವ ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಳಿಸಿಕೊಳ್ಳಬಹುದು ಎಂದರು. ಇದರೊಂದಿಗೆ ಲೋಕ ಅದಾಲತ್‍ನಲ್ಲಿ ಇತರ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿಕೊಳ್ಳಲು ಅವಕಾಶವಿದ್ದು, ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ನ್ಯಾಯಾಲಯದಲ್ಲಿ ಉಭಯ ಕಡೆಯವರ ಸಮಕ್ಷಮ ದಾವೆಯನ್ನು ಇತ್ಯರ್ಥಗೊಳಿಸಲಾಗುವದು. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ನ್ಯಾಯಾಧೀಶರು ತಿಳಿಸಿದರು. ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಗೋವಿಂದರಾಜು, ವಕೀಲರ ಸಂಘದ ಅಧ್ಯಕ್ಷ ತಿಮ್ಮಯ್ಯ, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಸಮಾಜ ಕಲ್ಯಾಣಾಧಿಕಾರಿ ಶೇಖರ್, ಡಿವೈಎಸ್‍ಪಿ ಶೈಲೇಂದ್ರ, ವೃತ್ತನಿರೀಕ್ಷಕ ಮಹೇಶ್, ಕ್ಷೇತ್ರಶಿಕ್ಷಣಾಧಿಕಾರಿ ಪಾಂಡು, ಠಾಣಾಧಿಕಾರಿಗಳಾದ ಶ್ರೀಧರ್, ವಿರೂಪಾಕ್ಷ, ದೇವರಾಜು, ಸೆಸ್ಕ್ ಅಭಿಯಂತರರಾದ ಕವಿತ ಅವರುಗಳು ಭಾಗವಹಿಸಿದ್ದರು.