ಭಾಗಮಂಡಲ, ನ. 13: ವಿಷಸೇವನೆ ಮಾಡಿದ್ದ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಂದಚೇರಿಯ ತಾಪ್ರಿಕಾಡ್ ನಿವಾಸಿ, ರಾಮಣ್ಣ (47) ಎಂಬವರು ಮೊನ್ನೆ ವಿಷಸೇವನೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಭಾಗಮಂಡಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.