ಮಡಿಕೇರಿ, ನ. 13: ಜಿಲ್ಲೆಯಲ್ಲಿ ತಾ. 13 ರಂದು ಹೊಸದಾಗಿ 22 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 77,934 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,144 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,962 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 70 ಮಂದಿ ಸಾವನ್ನಪ್ಪಿದ್ದು 112 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 17 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 2 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 93 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 118 ನಿಯಂತ್ರಿತ ವಲಯಗಳಿವೆ.