ಸಿದ್ದಾಪುರ, ನ. 14: ಕರ್ನಾಟಕದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಾರಿ ಮತಗಳ ಅಂತರದಿಂದ ಜಯಗಳಿಸಿದ ಹಾಗೂ ಬಿಹಾರ ರಾಜ್ಯದಲ್ಲಿಯ ಚುನಾವಣೆಯಲ್ಲೂ ಬಿಜೆಪಿ ಪಕ್ಷ ದಿಗ್ವಿಜಯ ಸಾಧಿಸಿದ ಹಿನ್ನೆಲೆ ನೆಲ್ಯಹುದಿಕೇರಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ನಗರದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಶಕ್ತಿ ಕೇಂದ್ರದ ಪ್ರಮುಖ ಬೆಳ್ಳಿಯಪ್ಪ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಘೋಷಣೆಯೊಂದಿಗೆ ಮೆರವಣಿಗೆಯ ಮೂಲಕ ತೆರಳಿ ನಗರದಲ್ಲಿ ಸಭೆ ಸೇರಿ ಸಂಭ್ರಮಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿ.ಕೆ. ಲೋಕೇಶ್, ಶಕ್ತಿ ಕೇಂದ್ರ ಸಹ ಪ್ರಮುಖ ಪ್ರಮೋದ್, ಯುವ ಮೋರ್ಚಾ ಅಧ್ಯಕ್ಷ ಸಚಿನ್, ಕೃಷಿ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಎಸ್.ಸಿ. ಮೋರ್ಚಾ ಅಧ್ಯಕ್ಷ ಮಹೇಂದ್ರ, ಪಕ್ಷದ ಪ್ರಮುಖರಾದ ಶ್ರೇಯಸ್, ಸುರೇಶ್, ಚಂದ್ರೇಗೌಡ ಇನ್ನಿತರರು ಹಾಜರಿದ್ದರು.