ಮಡಿಕೇರಿ, ನ. 14: ಜಿಲ್ಲೆಯಲ್ಲಿ ತಾ. 14 ರಂದು ಹೊಸದಾಗಿ 10 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 78,486 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,154 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,982 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 70 ಮಂದಿ ಸಾವನ್ನಪ್ಪಿದ್ದು 102 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 15 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 87 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 115 ನಿಯಂತ್ರಿತ ವಲಯಗಳಿವೆ.