ಮಡಿಕೇರಿ, ನ. 14: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ತಾ. 15 ರಂದು (ಇಂದು) ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರು ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಸ್ಥಾಪಕಾಧ್ಯಕ್ಷರಾದ ಕೊಂಗಂಡ ಎಸ್. ದೇವಯ್ಯ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಶುಂಪಾಲರಾದ ಡಾ. ಜಗತ್ ತಿಮ್ಮಯ್ಯ ಭಾಗವಹಿಸಲಿದ್ದಾರೆ.