ಗೋಣಿಕೊಪ್ಪಲು, ನ. 14: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ವೀರಾಜಪೇಟೆ ತಾಲೂಕು ಸಮಿತಿ ವತಿಯಿಂದ ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಗೌರವ ನೀಡುವ ಕಾರ್ಯಕ್ರಮ ಗೋಣಿಕೊಪ್ಪಲುವಿನಲ್ಲಿ ನಡೆಯಲಿದೆ.

2019-20ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವೀರಾಜಪೇಟೆ ತಾಲೂಕಿನ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಹಾಗೂ ಜಾತಿ ದೃಢೀಕರಣ ಪತ್ರದೊಂದಿಗೆ ತಾ. 25 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಎನ್. ವೀರಭದ್ರಯ್ಯ, ವಿಭಾಗೀಯ ಸಂಚಾಲಕರು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕೊಡಗು ಧ್ವನಿ ವಾರಪತ್ರಿಕೆ ಕಚೇರಿ ಬಸ್ ನಿಲ್ದಾಣ ಗೋಣಿಕೊಪ್ಪಲು ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.