*ಗೋಣಿಕೊಪ್ಪಲು, ನ. 14: ಸುಮಾರು 9ಕ್ಕೂ ಹೆಚ್ಚು ಫಲಾನುಭವಿಗಳಿಗೆ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ ಮಂಜೂರಾತಿ ಪತ್ರವನ್ನು ಶಾಸಕ ಕೆ.ಜಿ. ಬೋಪಯ್ಯ ಅವರು ನೀಡಿದರು.

ಪೆÇನ್ನಂಪೇಟೆ ತಾಲೂಕು ಪಂಚಾಯಿತಿ ಶಾಸಕರ ಕಚೇರಿಯಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬರು ಹಕ್ಕುದಾರರಾಗಿದ್ದಾರೆ. ಹೀಗಾಗಿ ಯಾವುದೇ ಭೇದವಿಲ್ಲದೇ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ಬೋಜಪ್ಪ, ಪೆÇನ್ನಂಪೇಟೆ ಎ.ಪಿ.ಸಿ.ಎಂ.ಸಿ. ಅಧ್ಯಕ್ಷ ಮುದ್ದಿಯಡ ಮಂಜು, ಕಂದಾಯ ಇಲಾಖೆ ಪರಿವೀಕ್ಷಕ ಮಂಜುನಾಥ್, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಗಡ ಮಧು ದೇವಯ್ಯ, ಸಹ ಕಾರ್ಯದರ್ಶಿ ನರಸಿಂಹ ಹಾಜರಿದ್ದರು.