ಚೆಂಬು, ನ. 15: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ರೂ 1 ಕೋಟಿ ವೆಚ್ಚದ ಚೆಟ್ಟಿಮಾನಿ-ದಬ್ಬಡ್ಕ-ಕಲ್ಲುಗುಂಡಿ ರಸ್ತೆಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು. ನಂತರ ಇದೇ ರಸ್ತೆಯ ಮುಂದಿನ ಹಂತದ ಕೆಲಸಕ್ಕಾಗಿ ರೂ 2ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಚೆಂಬು ಶಾಖೆಯ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆ ನಡೆಯಿತು. ಈ ಸಂದರ್ಭ ಗ್ರಾಮದ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಗ್ರಾಮಸ್ಥರು ದೂರು ಮತ್ತು ಮನವಿಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ ಎನ್.ಸಿ ಊರುಬೈಲು, ಚೆಂಬು ಶಕ್ತಿಕೇಂದ್ರದ ಪ್ರಮುಖ್ ಸುಬ್ರಹ್ಮಣ್ಯ ಉಪಾಧ್ಯಾಯ, ಸಂಪಾಜೆ ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷ ಕುಮಾರ್ ಚಿದ್ಕಾರ್, ದಿನೇಶ್ ಯು.ಕೆ. ಸೇರಿದಂತೆ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.