ಮಡಿಕೇರಿ, ನ. 15: ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ವೈಟ್ ಬೋರ್ಡ್ ಕಾನೂನು ಬಾಹಿರ ಟ್ಯಾಕ್ಸಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯಲ್ಲಿ ಡಿವೈಎಸ್‍ಪಿ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಜಿಲ್ಲೆಯ 3 ತಾಲೂಕುಗಳ ಪ್ರತಿಯೊಂದು ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳ ಪ್ರವಾಸಿ ವಾಹನ ನಿಲ್ದಾಣಗಳಲ್ಲಿ ವೈಟ್‍ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು ನಿಲ್ಲಿಸಿ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ತೆರಿಗೆ ಕಟ್ಟಿ ವಾಹನ ಚಲಾಯಿಸುತ್ತಿರುವ ಪ್ರವಾಸಿ ವಾಹನ ಚಾಲಕರಿಗೆ ನಷ್ಟವಾಗಿದೆ. ಆದ್ದರಿಂದ ಪೆÇಲೀಸ್ ಇಲಾಖೆ ಹಾಗೂ ಆರ್‍ಟಿಒ ಇಲಾಖೆ ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ವಿನ್ಸೆಂಟ್ ಬಾಬು ಮಾತನಾಡಿ, ಕಾನೂನು ಬಾಹಿರ ಟ್ಯಾಕ್ಸಿಗಳ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದಾಗಿ ಸರ್ಕಾರಕ್ಕೆ ನಿಗದಿತ ತೆರಿಗೆಗಳನ್ನು ಕಟ್ಟಿ ವಾಣಿಜ್ಯ ಉದ್ದೇಶಗಳಿಗಾಗಿ ನಿಲ್ದಾಣಗಳಲ್ಲಿ ಬಾಡಿಗೆಯನ್ನು ಕಾಯುತ್ತಾ ನಿಲ್ಲುತ್ತಿರುವ ಪ್ರವಾಸಿ ವಾಹನಗಳಿಗೆ ಬಾಡಿಗೆ ಇಲ್ಲದೆಯೇ ನಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ವೈಟ್‍ಬೋರ್ಡ್ ಕಾರುಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಇದರಿಂದ ಪ್ರವಾಸಿ ವಾಹನಗಳನ್ನು ಚಲಾಯಿಸುತ್ತಿರುವ ವಿದ್ಯಾವಂತ ಯುವಕರು ಇನ್ನಿತರ ಪ್ರವಾಸಿ ಚಾಲಕರುಗಳು ಮತ್ತು ಮಾಲೀಕರುಗಳು ಮತ್ತು ಅವರನ್ನು ಅವಲಂಭಿಸಿರುವ ಕುಟುಂಬ ವರ್ಗದವರು ಬೀದಿಗೆ ಬಂದು ನಿಲ್ಲುವಂತಹ ಪರಿಸ್ಥಿತಿ ಎದುರಾಗಿದೆ. ಇನ್ನು ಕಾರು ಚಾಲಕ ವೃತ್ತಿಯನ್ನು ನಂಬಿ ವಿವಿಧ ರೀತಿಯ ವಾಹನ ಸಾಲಗಳನ್ನು ಪಡೆದುಕೊಂಡಿರುವ ಮಾಲೀಕರುಗಳು ಹಾಗೂ ಚಾಲಕರುಗಳಿಗೆ ಮಾಸಿಕ ಸಾಲದ ಕಂತುಗಳನ್ನು ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಈ ಸಂದರ್ಭ ಸಂಘದ ಎಂ.ಎ. ರಫೀಕ್, ಪ್ರಧಾನ ಕಾರ್ಯದರ್ಶಿ ರಕೀಬ್, ಜಿಲ್ಲಾ ಖಜಾಂಚಿ ಪಿ.ಎ. ಬಿ.ಎಲ್. ತಿರುಪತಿ ಮತ್ತಿತರರು ಇದ್ದರು.