ಕೂಡಿಗೆ, ನ. 15: ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ 2020-21ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ವಿಶೇಷ ಗ್ರಾಮಸಭೆ ಗ್ರಾ.ಪಂ. ಸಭಾಂಗಣದಲ್ಲಿ ಆಡಳಿ ತಾಧಿಕಾರಿ ಎಸ್. ವರದ ರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು. ಆಡಳಿತಾಧಿಕಾರಿ ವರದರಾಜ್ ಮಾತನಾಡಿ, ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಇದರಿಂದಾಗಿ ಯೋಜನೆ ಹಣವು ನೇರವಾಗಿ ಫಲಾನುಭವಿ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ. ಅಲ್ಲದೆ ಸಣ್ಣ ಪ್ರಮಾಣದ ಕಾಮಗಾರಿಗಳನ್ನು ಪೂರ್ಣಗೊಳಿಸುವುದರಿಂದ ಗ್ರಾಮದ ಪ್ರಗತಿಗೆ ಪೂರಕವಾಗುತ್ತದೆ ಎಂದರು. ಸಭೆಯ ನೋಡಲ್ ಅಧಿಕಾರಿಯಾಗಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ ಆಗಮಿಸಿದ್ದರು. ಕಾರ್ಯದರ್ಶಿ ಶಿಲ್ಪ ಸ್ವಾಗತಿಸಿ, ವಂದಿಸಿದರು.