ಮಡಿಕೇರಿ, ನ. 15: ಕೊಡವ ವiಕ್ಕಡ ಕೂಟದ ವತಿಯಿಂದ ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಹಾಗೂ ರಾಣು ಅಪ್ಪಣ್ಣ ದಂಪತಿ ದಾಖಲೀಕೃತ ಒತ್ತಜೋಡಿ, ಚಂಗೀರ, ಅಪ್ಪಣ್ಣ ದಂಪತಿ ಕಂಡ ಅಮೇರಿಕಾ ಹಾಗೂ ಅಪ್ಪಣ್ಣ ದಂಪತಿ ಕಂಡ ಯೂರೋಪ್ ಎಂಬ ನಾಲ್ಕು ಪುಸ್ತಕ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ ಕೂಟದ ಸಂಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ತಾ. 22 ರಂದು ಮಡಿಕೇರಿಯ ಪತ್ರಿಕಾಭವನದಲ್ಲಿ ನಡೆಯಲಿದೆ ಎಂದು ಕೂಟದ ಪ್ರಧಾನ ಕಾರ್ಯದರ್ಶಿ ಪುತ್ತರಿರ ಕರುಣ್ಕಾಳಯ್ಯ ತಿಳಿಸಿದ್ದಾರೆ.
ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮೇರಿಯಂಡ ಸಿ. ನಾಣಯ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಹಿರಿಯ ಸಾಹಿತಿ ಬಾಚರಣಿಯಂಡ ಪಿ. ಅಪ್ಪಣ್ಣ, ರಾಣುಅಪ್ಪಣ್ಣ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಸಮಾಜ ಸೇವಕ ಬೊಳ್ಳಜಿರ ಸುಬ್ಬಯ್ಯ, ಮೈಸೂರಿನ ಶಾರದಾ ಜ್ಯುವೆಲರ್ಸ್ನ ಪಾಲುದಾರ ಎಸ್.ಬಿ. ಅರುಣಾಚಲ ಭಾಗವಹಿಸಲಿದ್ದಾರೆ.
ಕೊಡವ ಮಕ್ಕಡ ಕೂಟದಿಂದ ಬಾಚರಣಿಯಂಡ ಅಪ್ಪಣ್ಣ ದಂಪತಿಯ ಸನ್ಮಾನ ನಡೆಯಲಿದೆ.