ಮಡಿಕೇರಿ, ನ. 15: ಇತ್ತೀಚೆಗೆ ನಡೆದ ಆರ್‍ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆ ಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಇವಿಎಂ ಯಂತ್ರವನ್ನು ಹ್ಯಾಕ್ ಮಾಡಿರುವ ಬಗ್ಗೆ ಸಂಶಯವಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಟಿ.ಎಂ. ಶಾಹಿದ್ ಆರೋಪಿಸಿದ್ದಾರೆ.

ಬಿಜೆಪಿಯ ಯಾವುದೇ ತಂತ್ರಗಾರಿಕೆಗೆ ಕಾಂಗ್ರೆಸ್ ಧೃತಿ ಗೆಡುವುದಿಲ್ಲ ಎಂದು ಸುದ್ದಿಗೋಷ್ಠಿ ಯಲ್ಲಿ ಟೀಕಿಸಿದ ಅವರು, ಕಾಂಗ್ರೆಸ್ ಸಂವಿಧಾನ ಬದ್ಧವಾಗಿ ಹೋರಾಟ ವನ್ನು ನಡೆಸಲಿದೆ ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್, ಪ್ರಮುಖರಾದ ಸುಜು ತಿಮ್ಮಯ್ಯ, ಖಲೀಲ್ ಭಾಷ, ಗೀತಾ ಧರ್ಮಪ್ಪ ಹಾಗೂ ಕಾಂಗ್ರೆಸ್ ಸೇವಾದಳದ ಮಡಿಕೇರಿ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಉಪಸ್ಥಿತರಿದ್ದರು.