ಸೋಮವಾರಪೇಟೆ, ನ. 15: ದೊಡ್ಡಮಳ್ತೆಯ ಪ್ಲಾಂಟರ್ಸ್ ಕ್ಲಬ್ ಮತ್ತು ಫಾರ್ಮರ್ಸ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಗ್ರಾಮೀಣ ಮಕ್ಕಳಿಗೆ ಷಟಲ್ ಬ್ಯಾಡ್ಮಿಂಟನ್ ತರಬೇತಿ ಕಾರ್ಯಾಗಾರಕ್ಕೆ ಕ್ಲಬ್‍ನ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಕ್ಲಬ್‍ನ ಅಧ್ಯಕ್ಷ ಎಸ್.ಎಂ. ಲಿಂಗರಾಜು ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಿ, ಗ್ರಾಮೀಣ ಮಕ್ಕಳು ಓದಿನೊಂದಿಗೆ ಕ್ರೀಡೆಯಲ್ಲೂ ಸಾಧನೆ ಮಾಡಬೇಕು. ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತರಬೇತಿ ನೀಡಲಾಗುವುದು. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಕೊಡಗಿಗೂ, ಕ್ರೀಡೆಗೂ ಅವಿನಾಭಾವ ಸಂಬಂಧವಿದೆ. ಕೊಡಗಿನ ಅನೇಕ ಮಂದಿ ಕ್ರೀಡೆಯ ಮೂಲಕ ಉನ್ನತ ಹುದ್ದೆಯನ್ನು ಪಡೆದುಕೊಂಡಿದ್ದಾರೆ. ಕ್ರೀಡೆಯಿಂದ ಆರೋಗ್ಯ ವೃದ್ಧಿಸುತ್ತದೆ. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪೋಷಕರ ಕರ್ತವ್ಯವಾಗಿದೆ ಎಂದು ಬ್ಯಾಡ್ಮಿಂಟನ್ ಕೋಚ್ ಗೌತಮ್ ಕಿರಗಂದೂರು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ 9663910256, 9448401922 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕ್ರೀಡಾ ಸಮಿತಿಯ ಎಸ್.ಪಿ.ಶ್ರೀಹರಿ ಹೇಳಿದರು. ವೇದಿಕೆಯಲ್ಲಿ ಕ್ಲಬ್‍ನ ಮಾಜಿ ಅಧ್ಯಕ್ಷರುಗಳಾದ ಎಸ್.ಎಂ. ಪುಟ್ಟರಾಜು, ಡಿ.ಡಿ. ಶಾಂತರಾಜು, ಕೆ.ಎಸ್. ಅಶೋಕ್, ಹೆಚ್.ಕೆ. ಪ್ರಸ್ಸಿ ಇದ್ದರು.